Nov 16, 2009

"ಜೋಗದ ಸಿರಿ ಬೆಳಕಿನಲ್ಲಿ ತುಂಗೆಯ ತೆನೆ ಬಳುಕಿನಲ್ಲಿ" Dr.K.S Nissar Ahamed

ಜೋಗದ ಸಿರಿ ಬೆಳಕಿನಲ್ಲಿ ತುಂಗೆಯ ತೆನೆ ಬಳುಕಿನಲ್ಲಿ
ಸಹ್ಯಾದ್ರಿಯ ಲೋಹದದಿರ ಉತ್ತುಂಗದ ನಿಲುಕಿನಲ್ಲಿ
ನಿತ್ಯಹರಿದ್ವರ್ಣ ವನದ ತೇಗ ಗಂಧ ತರುಗಳಲ್ಲಿ
ನಿತ್ಯೋತ್ಸವ ತಾಯೆ ನಿತ್ಯೋತ್ಸವ ನಿನಗೆ
ನಿತ್ಯೋತ್ಸವ ತಾಯೆ ನಿತ್ಯೋತ್ಸವ ||ಜೋಗದ ||

ಇತಿಹಾಸದ ಹಿಮದಲ್ಲಿನ ಸಿಂಹಾಸನ ಮಾಲೆಯಲ್ಲಿ
ಗತಸಾಹಸ ಸಾರುತಿರುವ ಶಾಸನಗಳ ಸಾಲಿನಲ್ಲಿ
ಓಲೆಗರಿಯ ಸಿರಿಗಳಲ್ಲಿ ದೇಗುಲಗಳ ಬಿತ್ತಿಗಳಲಿ
ನಿತ್ಯೋತ್ಸವ ತಾಯೆ ನಿತ್ಯೋತ್ಸವ ನಿನಗೆ
ನಿತ್ಯೋತ್ಸವ ತಾಯೆ ನಿತ್ಯೋತ್ಸವ ||ಜೋಗದ ||

ಹಲವೆನ್ನದ ಹಿರಿಮೆಯೆ ಕುಲವೆನ್ನದ ಗರಿಮೆಯೆ
ಸದ್ವಿಕಾಸ ಶೀಲ ನುಡಿಯ ಲೋಕಾವೃತ ಸೀಮೆಯೆ
ಈ ವತ್ಸರ ನಿರ್ಮತ್ಸರ ಮನದುದಾರ ಮಹಿಮೆಯೆ
ನಿತ್ಯೋತ್ಸವ ತಾಯೆ ನಿತ್ಯೋತ್ಸವ ನಿನಗೆ
ನಿತ್ಯೋತ್ಸವ ತಾಯೆ ನಿತ್ಯೋತ್ಸವ ||ಜೋಗದ ||

No comments: